ಸಿದ್ಧಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಮಕೃಷ್ಣ ಮಠದ ವತಿಯಿಂದ ಸಮವಸ್ತ್ರ ವಿತರಣೆ
ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಮಂಗಳೂರಿನ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ವತಿಯಿಂದ ಉಚಿತ ಸಮವಸ್ತ್ರ ವಿತರಣೆ ಮಂಗಳವಾರ ನಡೆಯಿತು.
ಶಿಕ್ಷಕ ಮಹೇಶ ಕರ್ಕೇರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತದ ಭವ್ಯ ಪರಂಪರೆಯ ಅರಿವು ಮೂಡಿಸಿದ ಸ್ವಾಮಿ ವಿವೇಕಾನಂದರು ಯುವಕರಿಗೆ ಆರ‍್ಶ ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಗಿರೀಶ ಭಟ್ ಅಜೆಕ್ಕಳ ಕರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಡಾ. ಸುಂದರೇಶ್ ಕಾರ್ಯಕ್ರಮ ನಿರೂಪಿಸಿದರು.