ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಿಂದ ವನಮಹೋತ್ಸವ ಆಚರಣೆ
ಬಂಟ್ವಾಳ: ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಕುಕ್ಕಿಪಾಡಿ ಗ್ರಾಮಪಂಚಾಯತ್ ಆಶ್ರಯದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಆರ್ ಪೂಜಾರಿ, ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಗ್ರಾಮಪಂಚಾಯತ್ ಪಿ.ಡಿ.ಒ. ಶ್ರೀಮತಿ ತುಳಸಿ, ಗ್ರಾಮಪಂಚಾಯತ್ ಸದಸ್ಯರಾದ ಶೇಖರ ಪೂಜಾರಿ, ಸಹಶಿಬಿರಾಧಿಕಾರಿಗಳಾದ ಶ್ರೀ ಲಕ್ಷ್ಮಣ್, ಶ್ರೀಮತಿ ಬಬಿತಾ, ಕು.ಶ್ರೀದೇವಿ ಹಾಗೂ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರು ಪಾಲ್ಗೊಂಡಿದ್ದರು.