ಕಿಲೆಂಜಾರು ಗ್ರಾಮದ ಉಳಿಪಾಡಿ ಜಗನ್ನಾಥ ರೈ ನೇಣಿಗೆ ಶರಣು
ಕೈಕಂಬ: ಮೂತ್ರಕೋಶದ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೆಂಜಾರು ಗ್ರಾಮದ ಉಳಿಪಾಡಿ ಎಂಬಲ್ಲಿ ಬುಧವಾರ ನಡೆದಿದೆ.

ಮೃತರು ಜಗನ್ನಾಥ ರೈ ಉಳಿಪಾಡಿ (೮೪) ಮಂಗಳವಾರ ರಾತ್ರಿ ಊಟ ಮಾಡಿ ಮಲಗಿದ್ದ ರೈ ಅವರು ರಾತ್ರಿ ೧೨ ಗಂಟೆಯ ಬಳಿಕ ಮನೆಯ ಬಾವಿಗೆ ಅಳವಡಿಸಲಾಗಿದ್ದ ನೈಲಾನ್ ಹಗ್ಗವನ್ನು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.ಮೂತ್ರಕೋಶದ ಖಾಯಿಲೆಯಿಂದ ಬಳಲುತ್ತಿದ್ದ ಜಗನ್ನಾಥ ರೈ ಯವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿ ರಾಜಕೀಯ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಜಗನ್ನಾಥ ರೈಯವರು ಅನಾರೋಗ್ಯದ ಕಾರಣದಿಂದ ಕೆಲವು ವರ್ಷಗಳಿಂದ ರಾಜಕೀಯದಿಂದ ದೂರ ಉಳಿದಿದ್ದರು.ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅಳಿಯ ದಿಲೀಪ್ ರೈ ಬಜಪೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.