ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಬರೆಯುವ ಪುಸ್ತಕ ವಿತರಣೆ
ಕೈಕಂಬ : ಗುರುಪುರ ತಾರಿಕರಿಯದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಶುಕ್ರವಾರ ಉಚಿತ ಬರೆಯುವ ಪುಸ್ತಕ ವಿತರಿಸಲಾಯಿತು.

ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ, ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಶೀನ ಕೋಟ್ಯಾನ್, ನಿರ್ದೇಶಕರಾದ ಜಿ. ಎಂ. ಉದಯ ಭಟ್, ಲತಾ, ನಳಿನಿ ಶೆಟ್ಟಿ, ಪಂಚಾಯತ್ ಸದಸ್ಯೆ ಶಶಿಕಲಾ, ಎಸ್‌ಡಿಎಂಸಿ ಅಧ್ಯಕ್ಷೆ ಲತಾ, ಮುಖ್ಯ ಶಿಕ್ಷಕಿ ರಮಾದೇವಿ, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.