ಕಲ್ಲಡ್ಕ: ಶ್ರೀರಾಮ ಪ್ರಥಮ ದರ್ಜೆ ಕಾಲೇಜು ‘ರಾಷ್ಟ್ರ ಮಟ್ಟದ ವಿಚಾರ ಸಂಕಿರಣ’
ಬಂಟ್ವಾಳ:ಇಲ್ಲಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾ ವಿದ್ಯಾಲಯದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಸಹಭಾಗಿತ್ವದಲ್ಲಿ ‘ಸ್ವತ್ವದ ಆಧಾರದ ಮೇಲೆ ಭಾರತದ ಪುನರುತ್ಥಾನ’ ಎಂಬ ವಿಷಯದಲ್ಲಿ ಒಂದು ದಿನದ ‘ರಾಷ್ಟ್ರ ಮಟ್ಟದ ವಿಚಾರ ಸಂಕಿರಣ’ ಕಾರ್ಯಕ್ರಮ ಇದೇ 20 ರಂದು ನಡೆಯಲಿದೆ ಎಂದು ಸಂಸ್ಥೆ ಮುಖ್ಯಸ್ಥ ಡಾ.ಕೆ.ಪ್ರಭಾಕರ ಭಟ್ ಹೇಳಿದ್ದಾರೆ.

ಬಿ.ಸಿ.ರೋಡಿನಲ್ಲಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ 10 ವರ್ಷಗಳಿಂದ ಯುವ ಪೀಳಿಗೆಯಲ್ಲಿ ದೇಶೀಯ ಸಂಸ್ಕೃತಿ ಮತ್ತು ರಾಷ್ಟ್ರಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ವಿವಿಧ ವಿಚಾರ ಸಂಕಿರಣ ನಡೆಸಲಾಗುತ್ತಿದೆ.
ಹಿರಿಯ ಪತ್ರಕರ್ತ ಅಜಿತ್ ಹನುಮಕ್ಕನವರ್ ವಿಚಾರ ಸಂಕಿರಣ ಉದ್ಘಾಟಿಸಲಿದ್ದು, ಶಿವಮೊಗ್ಗ ವಿಶ್ರಾಂತ ಪ್ರಾಚಾರ್ಯ ಪ್ರೊ.ಬಿ.ಎಂ. ಕುಮಾರಸ್ವಾಮಿ, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಲೇಖಕ ಚಕ್ರವರ್ತಿ ಸೂಲಿಬೆಲೆ ಗೋಷ್ಠಿಯಲ್ಲಿ ಭಾಗವಹಿಸುವರು ಎಂದು ಅವರು ವಿವರಿಸಿದರು.
ಒಂದು ಕಾಲೇಜಿನಿಂದ ತಲಾ ನಾಲ್ವರಂತೆ 60ಕ್ಕೂ ಮಿಕ್ಕಿ ಕಾಲೇಜಿನಿಂದ ಸುಮಾರು 750 ಮಂದಿ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಇದ್ದರು.