ದಡ್ಡಲಕಾಡು ಶಾಲೆಯಲ್ಲಿ ಯೋಗದಿನಾಚರಣೆ
ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂಟರ್ ಆಕ್ಟ್ ಕ್ಲಬ್ ,ಎನ್ ಸಿ ಸಿ , ಹೆಲ್ತ್ ಕ್ಲಬ್ ,ಎಕೋ ಕ್ಲಬ್ ನ ಸಹಯೋಗದಲ್ಲಿ ಆಚರಿಸಲಾಯಿತು.

ಸಂಸ್ಥೆಯ ಮುಖ್ಯೋಪಾಧ್ಯಾಯರಾದ ರಮಾನಂದ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆ ಮಾಡಿ ಪ್ರತಿದಿನ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಪ್ರತಿಜ್ಞೆಯನ್ನು ಬೋಧಿಸಿದರು .

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಅಂಚನ್ ,ಪ್ರೌಢಶಾಲಾ ವಿಭಾಗದ ಎಸ್ .ಡಿ .ಎಂ .ಸಿ ಅಧ್ಯಕ್ಷರಾದ ಪುರುಷೋತ್ತಮ್ ಅಂಚನ್ ,ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ವಿನ್ನಿ ಸಿಂತಿಯ ,ಸಂಸ್ಥೆಯ ಶಿಕ್ಷಕರು ,ಸಿಬ್ಬಂದಿಗಳು ,ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.