ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಬುಧವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ವಸಂತ ಮಾಧವ ಅವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು “ಯೋಗವು ನಮ್ಮ ದೇಹವನ್ನು ಸದಾ ಕ್ರಿಯಾಶೀಲತೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಇದರೊಂದಿಗೆ ಪರಿಸರ ಸ್ವಚ್ಛವಾಗಿರಬೇಕು , ಮನಸ್ಸು ಶುದ್ಧವಾಗಿರಬೇಕು ,ಇದನ್ನು ಜೀವನದಲ್ಲಿ ಸದಾ ಅಳವಡಿಸಿಕೊಳ್ಳಬೇಕು ಮತ್ತು ಆರೋಗ್ಯವಂತರಾಗಿರಬೇಕು ಎಂದು ಶುಭ ಹಾರೈಸಿದರು.
ಅತಿಥಿಯಾಗಿದ್ದ ಯೋಗಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರಾದ ಪ್ರವೀಣ್ ಕೆ.ವಡೆಯಾರ್ ಮಾತನಾಡಿ ” ನಾವು ಒಂಬತ್ತನೇ ವರ್ಷದ ಯೋಗ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದೇವೆ. ಯೋಗದಲ್ಲಿ ಅಷ್ಟಾಂಗ ಯೋಗಗಳಿವೆ, ಇವುಗಳಲ್ಲಿ ಒಂದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ, ಯೋಗ ಕೇವಲ ಯೋಗ ದಿನಕ್ಕೆ ಸೀಮಿತವಾಗದೆ .ಜೀವನದಲ್ಲಿ ಸದಾ ಅಳವಡಿಸಿಕೊಂಡು ಮುನ್ನಡೆಯೋಣ.”ಎಂದು ಹೇಳಿದರು.
ಇದೇ ವೇಳೆ ದೈಹಿಕ ಶಿಕ್ಷಣ ಶಿಕ್ಷಕರಾದ ಪುರುಷೋತ್ತಮ ಶ್ರೀಮಾನ್ ಅವರು ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಯೋಗ ಪ್ರತಿಜ್ಞೆಯನ್ನು ಬೋಧಿಸಲಾಯಿತು.
ವೇದಿಕೆಯಲ್ಲಿ ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ
,ಎಂ.ಶ್ರೀ .ರಾಮ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಯೋಗ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರಾದ ಉಮೇಶ್ ಎಂ ರವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎನ್‌ಸಿಸಿ, ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಾತಾಜಿ,ಶ್ರೀಮಾನ್ ಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಶ್ರದ್ಧಾ ಸ್ವಾಗತಿಸಿ, ಮೇಘಶ್ರೀ ವಂದಿಸಿದಳು.ಭೂಷಣ್ ನಿರೂಪಿಸಿದನು.