ವಾಮದಪದವು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಸಹಯೋಗದೊಂದಿಗೆ ೯ನೇ ಅಂತಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿರ್ವಹಣಾಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಅನಿಲ್‌ಕುಮಾರ್ ಎ ಅವರು ಯೋಗ ದಿನಾಚರಣೆಯ ತತ್ವಗಳು ಮತ್ತು ಯೋಗದ ಇತಿಹಾಸದ ಬಗ್ಗೆ ಮತ್ತು ಪ್ರಸ್ತುತ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನಾಚರಣೆಯ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಹೆಚ್ ಬಿ ಅವರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಯೋಗದಿಂದ ಆದ ಪ್ರಯೋಜನ ಮತ್ತು ಪ್ರಸ್ತುತ ಬಿಡುವಿಲ್ಲದ ಜೀವನ ಶೈಲಿಗೆ ಪ್ರತಿ ನಿತ್ಯ ಯೋಗ ಮಾಡುವುದರಿಂದ ಆಗುವ ಪ್ರಯೋಜನದ ಬಗ್ಗೆ ತಿಳಿಸಿದರು. ಸಮಾರಂಭದಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಮೋಹನ್‌ದಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಡಾ. ಮೇರಿ ಎಂ.ಜೆ. ಮತ್ತು ಪ್ರೊ. ಉದಯಕುಮಾರ್ ಸಿ.ಆರ್. ಇತರ ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಕು. ಚಿತ್ರ, ಪ್ರಾರ್ಥಿಸಿದಳು, ಕು. ನಿಕ್ಷಿತ ಸ್ವಾಗತಿಸಿದರು. ಕು. ದೀಕ್ಷ ವಂದಿಸಿದರು. ಕು. ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಕು. ನೀಲಮ್ಮ ಮತ್ತು ತಂಡದವರು ಯೋಗ ಪ್ರಾತ್ಯಕ್ಷತೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.