ಎಳ್ಳಾರೆ:ಕನ್ನಡಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕಾರ್ಕಳ:ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಅರ್ಹ ಫಲಾನುಭವಿಗಳಿಗೆ ಕನ್ನಡಕ ವಿತರಣೆ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಯಾಂಪ್ಕೋ ನಿರ್ದೇಶಕರಾದ ದಯಾನಂದ ಹೆಗ್ಡೆಯವರು ಮಾತನಾಡಿ ಭಾರತ ಸಾಂಸ್ಕೃತಿಕ ಹಿನ್ನಲೆ ಇರುವ ದೇಶ,ಯುವಕರು ಒಂದಾದರೆ ಸಧೃಡ ರಾಷ್ಟ್ರವನ್ನು ಕಟ್ಟಬಹುದು ಆದರೆ ಯುವಕರು ಇಲ್ಲಿ ಒಂದಾಗುವುದು ಅಗತ್ಯವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಡ್ತಲ ಗ್ರಾ.ಪಂ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್,ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಮಲ್ಯ,ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಸಂಸ್ಥಾಪಕರಾದ ದೇವೇಂದ್ರ ಕಾಮತ್,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಳ್ಳಾರೆಯ ಅಧ್ಯಕ್ಷರಾದ ಶಾಂತಿ ಪ್ರಭು ಉಪಸ್ಥಿತರಿದ್ದರು.
ದಿವ್ಯಾ ಕಾಮತ್ ಸ್ವಾಗತಿಸಿ,ಹರೀಶ್ ದುಗ್ಗನ್ ಬೆಟ್ಟು ವಂದಿಸಿದರು.ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.