ಬಂಟ್ವಾಳ: ಕಾಂಗ್ರೆಸ್ ಮುಖಂಡ ಪೂಜಾರಿ ಮನೆಗೆ
ಸಚಿವ ದಿನೇಶ್ ಗುಂಡೂರಾವ್ ಭೇಟಿ
ಬಂಟ್ವಾಳ: ದ. ಕ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕೇಂದ್ರ ಮಾಜಿ ಸಚಿವರಾದ ಬಿ. ಜರ್ನಾದನ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ, ಮಾರ್ಗದರ್ಶನ ಪಡೆದರು.
ನಂತರ ಬಿ ರಮಾನಾಥ ರೈ ಅವರನ್ನು ಭೇಟಿ ಮಾಡಿದರು. ಸಂದರ್ಭದಲ್ಲಿ ದ. ಕ. ಮೂರ್ತೆದಾರರ ಮಹಾಮಂಡಳದ ಅಧ್ಯಕ್ಷರಾದ ಕೆ. ಸಂಜೀವ ಪೂಜಾರಿ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಹಾಜರಿದ್ದರು.