ಸಿದ್ಧಕಟ್ಟೆ: ‘ಶಿಕ್ಷಕರು ಮತ್ತು ಮಕ್ಕಳ ಪೋಷಕರ ಸಮಾಲೋಚನಾ ಸಭೆ’ ಎಸ್ ಎಸ್ ಎಲ್ ಸಿ ಮತ್ತು ಪಿಯೂಸಿ ಸಾಧಕ ವಿದ್ಯಾಥರ್ಿಗಳಿಗೆ ಸನ್ಮಾನ
ಬಂಟ್ವಾಳ:ಕಳೆದ 20 ವರ್ಷಗಳ ಹಿಂದೆ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡಬೇಕು ಎಂಬ ನಿಟ್ಟಿನಲ್ಲಿ ಆರಂಭಗೊಂಡ ಗುಣಶ್ರೀ ವಿದ್ಯಾಲಯದಲ್ಲಿ ದೇಶೀಯ ಸಂಸ್ಕೃತಿ ಜೊತೆಗೆ ಕ್ರೀಡೆ ಮತ್ತಿತರ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಶಾಲಾ ಸಂಸ್ಥಾಪಕ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ.

ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಶುಕ್ರವಾರ ನಡೆದ ‘ಶಿಕ್ಷಕರು ಮತ್ತು ಮಕ್ಕಳ ಪೋಷಕರ ಪ್ರಥಮ ಸಮಾಲೋಚನಾ ಸಭೆ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇದೇ ವೇಳೆ ಎಸ್ ಎಸ್ ಎಲ್ ಸಿ ಮತ್ತು ಪಿಯೂಸಿ ಸಾಧಕ ವಿದ್ಯಾಥರ್ಿಗಳನ್ನು ಸನ್ಮಾನಿಸಲಾಯಿತು. ಶಾಲಾ ಸಂಚಾಲಕ ವಿಜಯ ಕುಮಾರ್ ಚೌಟ ಶುಭ ಹಾರೈಸಿದರು.
ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಅನಿಸಿಕೆ ವ್ಯಕ್ತಪಡಿಸಿದರು.ಪ್ರಾಂಶುಪಾಲೆ ಪೂಜಾ ಸ್ವಾಗತಿಸಿ, ಮುಖ್ಯಶಿಕ್ಷಕಿ ಜಯಶ್ರೀ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಚೈತ್ರ ವಂದಿಸಿ, ಪ್ರಾಧ್ಯಾಪಕಿ ಆಶಲತಾ ಮತ್ತು ನಿತಿನ್ ಕಾಡಬೆಟ್ಟು ಕಾರ್ಯಕ್ರಮನಿರೂಪಿಸಿದರು.