ಬಂಟ್ವಾಳ: ‘ಬಿಜೆಪಿ ವಿಶೇಷ ಜನಸಂಪರ್ಕ ಅಭಿಯಾನ’
ಬಂಟ್ವಾಳ:ಜಗತ್ತಿನಲ್ಲಿ ಭಾರತಕ್ಕೆ ಉನ್ನತ ಸ್ಥಾನಮಾನ ಸಹಿತ ಗೌರವ ತಂದು ದೇಶ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಇವರ ಸಮರ್ಥ ನಾಯಕತ್ವಕ್ಕೆ ದೇಶದ ಜನತೆ ಬೆಂಬಲ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ನೇತೃತ್ವದ ಇದೇ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಇಲ್ಲಿನ ಬಿ.ಸಿ.ರೋಡು ಸ್ಪರ್ಶ ಸಭಾಂಗಣದಲ್ಲಿ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಬಿಜೆಪಿ ವಿಶೇಷ ಜನಸಂಪರ್ಕ ಅಭಿಯಾನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಂಟ್ವಾಳ ಬಿಜೆಪಿ ಕ್ಷೇತ್ರ್ರಾಧ್ಯಕ್ಷ ದೇವಪ್ಪ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ ಕಾಣರ್ಿಕ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಶುಭ ಹಾರೈಸಿದರು.