ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ನೂತನ ಅಧ್ಯಕ್ಷರಾಗಿ,  ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು , ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಯ ಸಂಸ್ಥಾಪಕರಾದ ನ್ಯಾಯವಾದಿ ಶೈಲಜಾ ರಾಜೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬಿ.ಸಿ.ರೋಡಿನ ಗಾಣದ ಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಸಮಿತಿಯ ಅಧ್ಯಕ್ಷೆ ರೇವತಿ ಬಡಗಬೆಳ್ಳೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ  ನಡೆಯಿತು.
ಉಳಿದಂತೆ ರಾಗಿಣಿ (ಉಪಾಧ್ಯಕ್ಷರು),ರಶ್ಮಿ ಸತೀಶ್ (ಕಾರ್ಯದರ್ಶಿ),ಸರೋಜಿನಿ(ಜತೆ ಕಾರ್ಯದರ್ಶಿ) , ಸುಜಾತಾ ದಿನೇಶ್    (ಖಜಾಂಚಿ)  ಇವರನ್ನು ಆಯ್ಕೆ ಮಾಡಲಾಗಿದೆ.ಸಮಿತಿಯ ಮಾಜಿ ಅಧ್ಯಕ್ಷರುಗಳಾದ  ನಯನ,ಮಾಲತಿ,ಭಾರತಿ ಕುಂದರ್,ಜಯಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು. ಭವಾನಿ ಸ್ವಾಗತಿಸಿದರು ಕಾರ್ಯದರ್ಶಿ ಲಲಿತಾ ವಂದಿಸಿದರು.

By suddi9

Leave a Reply

Your email address will not be published. Required fields are marked *