ವಾಮದಪದವು ಕಾಲೇಜಿನ ವಾರ್ಷಿಕೋತ್ಸವ
ಬಂಟ್ವಾಳ: ಮೂರು ದಶಕಗಳನ್ನು ಪೂರೈಸಿದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ವು ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಹೆಚ್. ಬಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುರಿಯನ್ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸುಲೋಚನಾ ಜಿ.ಕೆ. ಭಟ್, ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಕೋರಿದರು.

ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಮೋಹನ್‌ದಾಸ್ ಗಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಸಂಸ್ಥೆಯ ಪೋಷಕರಾದ ಭೋಜರಾಜ ಶೆಟ್ಟಿ ಕೊರಗಟ್ಟೆ, ಅಮ್ಮು ರೈ ಹರ್ಕಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ವೇದಿಕೆಯ ಸಲಹೆಗಾರರಾದ ಕೃಷ್ಣಮೂರ್ತಿ ಎನ್ ಬಿ, ಐಕ್ಯೂಎಸಿ ಸಂಚಾಲಕರಾದ ಡಾ. ಮೋಹನ್‌ದಾಸ್ ಅವರು ವೇದಿಕೆಯಲ್ಲಿದ್ದರು.
ಇದೇ ವೇಳೆ ೨೦೨೧-೨೨ನೇ ಶೈಕ್ಷಣಿಕ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಅಂತಿಮ ಎಮ್‌ಕಾಂ ವಿದ್ಯಾರ್ಥಿ ಪ್ರಜ್ವಲ್ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಹಾಗೂ ತೃತೀಯ ಬಿಎಸ್ಸಿ ವಿದ್ಯಾರ್ಥಿ ಶ್ರೀಧರ್ ಅತ್ಯುತ್ತಮ ಗ್ರಂಥಾಲಯ ಬಳಕೆದಾರ ಪ್ರಶಸ್ತಿಗೆ ಭಾಜನರಾದರು. ರಾಷ್ಟ್ರ ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲಿ ಕಾಲೇಜಿಗೆ ಕೀರ್ತಿ ತಂದ ಶೈಕ್ಷಣಿಕ ಹಾಗೂ ಕ್ರೀಡಾ ಪ್ರತಿಭೆಗಳನ್ನು ಸನ್ಮಾನಿಸಲಾಯಿತು.
ಹಾಗೆಯೇ ೨೦೨೨-೨೩ರಲ್ಲಿ ಕಾಲೇಜಿನ ೨೧ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಸಂಸ್ಥೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದರು. ಇತ್ತೀಚೆಗೆ ವರ್ಗಾವಣೆಗೊಂಡ ಕಾಲೇಜಿನ ಪ್ರಾಧ್ಯಾಪಕರುಗಳನ್ನು, ಗ್ರಂಥಪಾಲಕರನ್ನು ಹಾಗೂ ನಿವೃತ್ತ ಶಿಕ್ಷಕ, ಶಿಕ್ಷಣ ತಜ್ಞರಾದ ನಾರಾಯಣ ನಾಯಕ್‌ರವರನ್ನು ಅಭಿನಂದಿಸಲಾಯಿತು.
ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ ವಿದ್ಯಾ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಐಕ್ಯೂಎಸಿ ಸಹಸಂಚಾಲಕರಾದ ಡಾ. ರಮ್ಯಶ್ರೀ ಎಮ್. ಜಿ ವಂದಿಸಿದರು.ವಿದ್ಯಾರ್ಥಿನಿ ಕು. ದೀಕ್ಷಾ ಕಾರ‍್ಯಕ್ರಮ ನಿರೂಪಿಸಿದರು
ಬಳಿಕ ನಡೆದ ಸಾಂಸ್ಕೃತಿಕ ಕಾರ‍್ಯಕ್ರಮದಲ್ಲಿ” ದಕ್ಷ ಯಜ್ಞ” ಎಂಬ ಪೌರಾಣಿಕ ಯಕ್ಷಗಾನ ಪ್ರಸಂಗವನ್ನು ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರಸ್ತುತ ಪಡಿಸಿದರು.