ಆಸರೆ ಸೇವಾ ಫೌಂಡೇಶನ್ ವತಿಯಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ
ಕೈಕಂಬ:ಆಸರೆ ಸೇವಾ ಫೌಂಡೇಶನ್ ಇದರ ಪ್ರಾಯೋಜಕತ್ವದಲ್ಲಿ ೨.೫ ಎನ್‌ವಿಜಿ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ವಿಭಾಗ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ಜು.೦೯ ರಂದು ಪುಂಚಮೆ ಶ್ರೀ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.

ಕರಿಯಂಗಳ ಗ್ರಾಮ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ೮೫% ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಎಂದು ಆಸರೆ ಸೇವಾ ಫೌಂಡೇಶನ್ ಪ್ರಕಟನೆ ತಿಳಿಸಿದೆ.