ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ: ಜುಲೈ 12.ರಂದು ನೂತನ ಪದಾಧಿಕಾರಿಗಳ ಪದಗ್ರಹಣ
ಬಂಟ್ವಾಳ: ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 12ರಂದು ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಗಣೇಶ್ ಶೆಟ್ಟಿ ಗೋಳ್ತಮಜಲು ತಿಳಿಸಿದ್ದಾರೆ.
ಶನಿವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರುಈ ಬಾರಿ ಮಧುಸೂಧನ ಶೆಣೈ ಕಾರ್ಯದರ್ಶಿಯಾಗಿ, ಜ್ಯೋತೀಂದ್ರ ಶೆಟ್ಟಿ ಕೋಶಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಪದಗ್ರಹಣ ಕಾರ್ಯವನ್ನು ಪೂರ್ವ ಜಿಲ್ಲಾ ಗವರ್ನರ್ ಎಂ.ರಂಗನಾಥ ಭಟ್ ನೆರವೇರಿಸಲಿದ್ದಾರೆ ಎಂದರು.
ಅತಿಥಿಗಳಾಗಿ ಸಹಾಯಕ ಗವರ್ನರ್ ಲಾರೆನ್ಸ್ ಗೋನ್ಸಾಲ್ವಿಸ್, ಜೋನಲ್ ಲೆಫ್ಟಿನೆಂಟ್ ರವೀಂದ್ರ ದರ್ಬೆ, ಜಿಎಸ್ ಆರ್ ಪದ್ಮನಾಭ ರೈ ಭಾಗವಹಿಸುವರು ಎಂದವರು ತಿಳಿಸಿದ್ದು, ಅಂಗನವಾಡಿ, ಶಾಲೆಗಳಿಗೆ ನೆರವು ಸಹಿತ ವಿವಿಧ ಸೇವಾಕಾರ್ಯಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು ಎಂದು ಹೇಳಿದರು. ಜಿಎಸ್ ಆರ್ ಪದ್ಮನಾಭ ರೈ ಅವರು ಕ್ಲಬ್ ಕೈಗೊಂಡ ಚಟುವಟಿಕೆಗಳನ್ನು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ನಿರ್ಗಮನ ಅಧ್ಯಕ್ಷೆ ಪಲ್ಲವಿ ಕಾರಂತ, ಸ್ಥಾಪಕಾಧ್ಯಕ್ಷ ಸತೀಶ್ ಕುಮಾರ ನಿಯೋಜಿತ ಕಾರ್ಯದರ್ಶಿ ಮಧುಸೂಧನ ಶೆಣೈ, ಮುಂದಿನ ಸಾಲಿನ ಅಧ್ಯಕ್ಷ ಶೇಷಪ್ಪ ಮೂಲ್ಯ, ಜ್ಯೋತೀಂದ್ರ ಶೆಟ್ಟಿ, ಪ್ರಶಾಂತ್ ಕಾರಂತ್ ಮತ್ತಿತರರು ಉಪಸ್ಥಿತರಿದ್ದರು.