ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ “ಪಾಂಚಜನ್ಯ” ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ “ಪಾಂಚಜನ್ಯ” ಹಿರಿಯ ವಿದ್ಯಾರ್ಥಿ ಸಂಘದ ಲಾಂಛನವನ್ನು ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕರು, ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ನರಿಂಗಾನ, ಕಲಾವಿದರಾದ ಬಡೆಕ್ಕಿಲ ಪ್ರದೀಪ, ಯಕ್ಷಗಾನ ಕಲಾವಿದೆ ಅಮೃತ ಅಡಿಗ,ಪ್ರಾಚಾರ್ಯರಾದ ಕೃಷ್ಣಪ್ರಸಾದ ಕಾಯಾರ್ಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕ ಯತಿರಾಜ್ ಪಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.