ಬಂಟ್ವಾಳ: ಎಸ್.ವಿ.ಎಸ್.ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ
ಬಂಟ್ವಾಳ:ಇಲ್ಲಿನ ಎಸ್.ವಿ.ಎಸ್.ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಕ್ಲಬ್‌ಗಳ ಹಾಗೂ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಉದ್ಯಮಿ ಸುರೇಶ್ ಬಾಳಿಗಾ ಅವರು ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣವನ್ನು ಬೆಳೆಸುವುದರೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯು ತೊಡಗಿಸಿಕೊಂಡಾಗ ಭವಿಷ್ಯದಲ್ಲಿ, ಉತ್ತಮ ನಾಗರೀಕರಾಗಲು ಸಾಧ್ಯ ಎಂದರು.
ಶಾಲಾ ಸಂಚಾಲಕರಾದ ಭಾಮಿ ನಾಗೇಂದ್ರನಾಥ್, ಶೆಣೈ, ಶಾಲಾ ಮುಖ್ಯೋಪಾಧ್ಯಾಯಿನಿ ರೋಶನಿ ತಾರ ಡಿಸೋಜ, ಸಹ ಮುಖ್ಯೋಪಾಧ್ಯಾಯಿನಿ ಜಾನಕಿ ರಾಜೇಶ್ , ಶಾಲಾ ಅಡಳಿತ ಮಂಡಳಿಯ ಸದಸ್ಯರಾದ ಬಿ. ಶಿವಾನಂದ ಬಾಳಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.