ವಾಮದಪದವು ಕಾಲೇಜಿನಲ್ಲಿ ತೃತೀಯ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವಿನಲ್ಲಿ ಮೂರು ವರ್ಷದ ಪದವಿ ವಿದ್ಯಾಭ್ಯಾಸವನ್ನು ಪೂರೈಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಔಪಚಾರಿಕ ವಿದಾಯ ಕೂಟ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಹೆಚ್. ಬಿ.ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಕಾಲೇಜನ ಹಿರಿಯ ವಿದ್ಯಾರ್ಥಿಗಳು ತಮ್ಮ ಉತ್ತಮ ನಡವಳಿಕೆ ಹಾಗೂ ಸಮಾಜಮುಖಿ ಕಾರ್ಯಗಳಿಂದ ಸಂಸ್ಥೆಯ ಕೀರ್ತಿ ಪತಾಕೆಯನ್ನು ಹಾರಿಸುವಲ್ಲಿ ಮತ್ತು ಕಾಲೇಜಿನ ಹಿರಿಯ ವಿದಾರ್ಥಿ ಸಂಘದ ಮೂಲಕ ಸಂಸ್ಥೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.
ಮುಂದಿನ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ಮೂರು ವರ್ಷದ ಬಿಎ, ಬಿಬಿಎ, ಬಿಕಾಂ, ಬಿಎಸ್ಸಿ, ಬಿಎಸ್‌ಡಬ್ಲ್ಯುಸ್ನಾತಕ ಪದವಿಗಳೊಂದಿಗೆ ಪ್ರಸಕ್ತ ಸಾಲಿನಿಂದ ಬಿಸಿಎ ಪದವಿ ಪ್ರಾರಂಭಗೊಂಡಿದೆ, ಮಧ್ಯಾಹ್ನದ ಬಿಸಿಯೂಟದ ಯೋಜನೆಯ ಅನುಸ್ಠಾನದಲ್ಲೂ ಸಂಸ್ಥೆಯ ಜೊತೆಗೆ ಹಿರಿಯವಿದ್ಯಾರ್ಥಿಗಳು ಸಹಕರಿಸಬೇಕು ಎಂದು ಅವರು ಕೋರಿದರು
.ವಿದ್ಯಾರ್ಥಿ ಕ್ಷೇಮಪಾಲನಾ ವೇದಿಕೆಯ ಮುಖ್ಯ ಸಲಹೆಗಾರರಾದ ಕೃಷ್ಣಮೂರ್ತಿ ಎನ್ ಬಿ, ಐಕ್ಯೂಎಸಿ ಸಂಚಾಲಕರಾದ ಡಾ. ಮೋಹನ್‌ದಾಸ್ ಹಾಗೂ ಕಾಲೇಜಿನ ಎಲ್ಲಾ ಬೋಧಕಸಿಬ್ಬಂದಿಗಳು ವೇದಿಕೆಯಲ್ಲಿ ದ್ದರು.ಹಿರಿಯ ವಿದ್ಯಾರ್ಥಿಗಳು ಕಾಲೇಜು, ಶಿಕ್ಷಕರು ಮತ್ತು ಸಹಪಾಠಿಗಳ ಜೊತೆಗಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಸಭಾಕಾರ‍್ಯಕ್ರಮದ ನಂತರ ಹಿರಿಯ-ಕಿರಿಯ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ‍್ಯಕ್ರಮಗಳು ನಡೆದವು.