ಪಂಜಿಕಲ್ಲು: ಸರ್ಕಾರಿ ಪ್ರೌಢಶಾಲೆ ವಿದ್ಯಾಥರ್ಿ ಸಂಘ ಉದ್ಘಾಟನೆ
ಬಂಟ್ವಾಳ:ವಿದ್ಯಾರ್ಥಿಗಳು ಶಿಸ್ತುಬದ್ಧ ಶಿಕ್ಷಣದ ಜೊತೆಗೆ ಬಾಲ್ಯದಿಂದಲೇ ನಾಯಕತ್ವ ಗುಣ ಮೈಗೂಡಿಸಿಕೊಂಡು ಸಮಾಜದ ಆಸ್ತಿಯಾಗಬೇಕು ಎಂದು ಮುಖ್ಯಶಿಕ್ಷಕ ದುರ್ಗಾಪ್ರಸಾದ್ ಕೆ.ಎಸ್. ಹೇಳಿದ್ದಾರೆ.

ಇಲ್ಲಿನ ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾಥರ್ಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕ ಮಹೇಶ ವಿ.ಕರ್ಕೇರ ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕ ಯತೀಶ್ ಅನಿಸಿಕೆ ವ್ಯಕ್ತಪಡಿಸಿದರು. ಇದೇ ವೇಳೆ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಬೋಧಿಸಲಾಯಿತು. ಶಿಕ್ಷಕಿ ಮ್ಯಾಗ್ನೆಟ್ ಮರ್ಲಿನ್ ಡಿಸೋಜ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಮನೋಹರಿ ವಂದಿಸಿ, ಶಿಕ್ಷಕ ಇಮ್ತಿಯಾಜ್ ಕಾರ್ಯಕ್ರಮ ನಿರೂಪಿಸಿದರು.