ರಾಯಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಲ್.ಕೆ.ಜಿ. ತರಗತಿ, ಸ್ಮಾಟ್ರ್ ಕ್ಲಾಸ್ ಉದ್ಘಾಟನೆ ಖಾಸಗಿ ಸಹಭಾಗಿತ್ವ ಅಗತ್ಯ: ಶಾಸಕ ರಾಜೇಶ ನಾಯ್ಕ್
ಬಂಟ್ವಾಳ:ಆಂಗ್ಲ ಭಾಷೆ ವ್ಯಾಮೋಹದ ನಡುವೆಯೂ ಶಿಕ್ಷಣಾಸಕ್ತರು ಮತ್ತು ವಿವಿಧ ಸಮಾಜಮುಖಿ ಸಂಘಟನೆಗಳ ಸಹಭಾಗಿತ್ವದಿಂದ ಮಾತ್ರ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸಾಧ್ಯವಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.

ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿವಿಧ ದಾನಿಗಳ ಸಹಕಾರದಲ್ಲಿ ನಿರ್ಮಾಣಗೊಂಡ ಎಲ್. ಕೆ.ಜಿ. ತರಗತಿ ಮತ್ತು ಸ್ಮಾರ್ಟ್ ಕ್ಲಾಸ್ ಸಹಿತ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ವೇಳೆ ಶಾಲಾ ಪ್ರವೇಶ ದ್ವಾರ, ಕುಡಿಯುವ ನೀರು ಶುದ್ಧೀಕರಣ ಯಂತ್ರ, ಸಿ.ಸಿ.ಕ್ಯಾಮೆರಾ, ರೂ 2ಲಕ್ಷ ವೆಚ್ಚದ ಸುಸಜ್ಜಿತ ಶೌಚಾಲಯ ಉದ್ಘಾಟಿಸಿದರು. ಇಲ್ಲಿನ ವಗರ್ಾವಣೆಗೊಂಡ ಮುಖ್ಯಶಿಕ್ಷಕ ಜಯರಾಮ ಪಡ್ರೆ, ದೈಹಿಕ ಶಿಕ್ಷಕಿ ಗಾಯತ್ರಿ ದೇವಿ ಇವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು. ದಾನಿಗಳಿಗೆ ಗೌರವ ಸಮರ್ಪಣೆ, ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ನಡೆಯಿತು.
ಟ್ರಸ್ಟಿನ ಗೌರವಾಧ್ಯಕ್ಷ ರಾಜೇಶ ಶೆಟ್ಟಿ ಸೀತಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಯಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಶುಭ ಹಾರೈಸಿದರು. ಸ್ವಾಮಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಚಂದ್ರಶೇಖರ ಗೌಡ ಕಾರಂಬಡೆ, ಟ್ರಸ್ಟಿ ಮಧುಕರ ಪಿ. ಬಂಗೇರ, ರಾಯಿ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧ್ಯಕ್ಷ ಕೆ.ಪರಮೇಶ್ವರ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ, ಉಪಾಧ್ಯಕ್ಷೆ ಚಂದ್ರಾವತಿ ಲೋಕೇಶ್ ಕೈತ್ರೋಡಿ, ಶಿಕ್ಷಕಿ ಜಾನೆಟ್ ಕಾನ್ಸೆಸೊ ಮತ್ತಿತರರು ಇದ್ದರು. ಉಪನ್ಯಾಸಕಿ ರೂಪಾ ಹರೀಶ ಆಚಾರ್ಯ ಸನ್ಮಾನಿತರನ್ನು ಪರಿಚಯಿಸಿದರು.