ಸಂಗಬೆಟ್ಟು ಪಣಂಬೂರು ಶ್ರೀ ವೀರಭದ್ರ ಮಹಾಮ್ಮಾಯಿ ದೇಗುಲಕ್ಕೆ ಸಂಸದ,ಶಾಸಕರ ಭೇಟಿ
ಬಂಟ್ವಾಳ: ಇತ್ತೀಚೆಗಷ್ಠೆ ಜೀರ್ಣೋದ್ದಾರಗೊಂಡು ಬ್ರಹ್ಮಕಲಶೋತ್ಸವ ಸಂನ್ನಗೊಂಡ ಬಂಟ್ವಾ ತಾಲೂಕಿನ ಸಿದ್ದಕಟ್ಟೆ ಸಂಗಬೆಟ್ಟುವಿನಲ್ಲಿರುವ ಪಣಂಬೂರು ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನಕ್ಕೆಬಿಜೆಪಿ ರಾಜ್ಯಾಧ್ಯಕ್ಷರು , ದ.ಕ. ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭಾನುವಾರ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ,ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ,ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು,ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ಹಾಗೂ ದೇವಳದ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ಈಸಂದರ್ಭದಲ್ಲಿ ಸಂಸದರು ಮತ್ತು ಶಾಸಕರನ್ನು ದೇವಳದ ವತೊಯಿಂದ ಗೌರವಿಸಲಾಯಿತು.