ಬಂಟ್ವಾಳ: ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ ಇದರ ಜಂಟಿ ಆಶ್ರಯದಲ್ಲಿ ಮೂರನೇ ವರ್ಷದ ಅತ್ಯುತ್ತಮ ವೆಬ್‍ಸೈಟ್ (ಅಂತರ್ಜಾಲ) ವರದಿಗೆ ನೀಡುವ ರಾಜ್ಯ ಮಟ್ಟದ ಬಿ.ಜಿ.ಮೋಹನ್‍ದಾಸ್ ಪ್ರಶಸ್ತಿ – 2023ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2022 ಜುಲೈ 1ರಿಂದ 2023 ಜೂನ್ 30ರವರೆಗೆ ಪ್ರಕಟವಾದ ಮಾನವೀಯ ಮೌಲ್ಯ, ಗ್ರಾಮೀಣ ಸಮಸ್ಯೆ, ತನಿಖಾ ಆಧಾರಿತ ವರದಿ, ಎಕ್ಸ್ ಕ್ಲೂಸಿವ್ ಸೇರಿದಂತೆ ಅತ್ಯುತ್ತಮ ವರದಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು.

ಪ್ರಶಸ್ತಿಗೆ ಕನ್ನಡ ವೆಬ್‍ಸೈಟ್‍ನಲ್ಲಿ ಪ್ರಕಟಗೊಂಡ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಒಬ್ಬ ಪತ್ರಕರ್ತರಿಗೆ ಒಂದು ವರದಿ ಮಾತ್ರ ಕಳುಹಿಸಲು ಅವಕಾಶವಿದೆ. ಪ್ರಶಸ್ತಿಯು 5,000 ರೂ. ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ.

ಅರ್ಜಿ ಸಲ್ಲಿಸುವಾಗ ವರದಿಯ 3 ಪ್ರತಿಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಆಗಸ್ಟ್ 10ರೊಳಗೆ ಕಳುಹಿಸಿಕೊಡಬೇಕು. ಜೊತೆಗೆ ವರದಿಯ ವೆಬ್‍ಸೈಟ್ ಲಿಂಕ್ (URL Adress) ಅನ್ನು ಕಡ್ಡಾಯವಾಗಿ 9844619763 ಈ ನಂಬರಿಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಬೇಕು ಎಂದು ಪ್ರಕಟನೆ ತಿಳಿಸಿದೆ.

ವರದಿ ಕಳುಹಿಸಬೇಕಾದ ವಿಳಾಸ: ದಿನೇಶ್ ಎನ್. ತುಂಬೆ, ಕಾರ್ಯದರ್ಶಿ, ನಿರತ ಸಾಹಿತ್ಯ ಸಂಪದ, ಪ್ರಗತಿ ಪ್ರಿಂಟರ್ಸ್, ತುಂಬೆ – 574 143, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ.

By Suddi9

Leave a Reply

Your email address will not be published. Required fields are marked *