ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬಂಟ್ವಾಳ ಘಟಕದ ಮಹಾಸಭೆ
ಬಂಟ್ವಾಳ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ಇದರ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿದರಲ್ಲಿ ನಡೆಯಿತು.ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೆ.ವಿಟ್ಲ. ಅವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಕೆಲಸದ ಗೌರವವನ್ನು ಉಳಿಸಿಕೊಂಡು ,ಉದ್ಯಮದಲ್ಲಿ ಯಶಸ್ಸು ಕಾಣಬೇಕು,ಜೊತೆಗೆ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ತಿಳಿಸಿದರು.
ಸಂಘಟನೆಯ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದ ಅವರು ದುಡಿದ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ಮೀಸಲಿಟ್ಟು ನಿರ್ಗತಿಕರ ಕಣ್ಣೀರು ಒರೆಸುವ ಕಾರ್ಯ ಮಾಡುವ ಎಂದು ತಿಳಿಸಿದರು.
ಇದೇ ವೇಳೆ ಪಿಯುಸಿ ವಾಣಿಜ್ಯ,ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಗೌರವ ನೀಡಲಾಯಿತು.
ಹಿರಿಯ ಶಾಮಿಯಾನ ಮಾಲಕರನ್ನು ಗುರುತಿಸಿ ಗೌರವಿಸಲಾಯಿತು.
ಜಿಲ್ಲಾ ಕಾರ್ಯದರ್ಶಿ ನಿಶಿತ್ ಪೂಜಾರಿ,ಜಿಲ್ಲಾ ಕೋಶಾಧಿಕಾರಿ ಬಾಲಕೃಷ್ಣ ಕದ್ರಿ, ಬಂಟ್ವಾಳ ಘಟಕದ ಗೌರವಾಧ್ಯಕ್ಷ ಸುಭಾಶ್ಚಂದ್ರ ಜೈನ್, ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್ , ಕೋಶಾಧಿಕಾರಿ ಐವನ್ ಡಿಸೋಜ, ಜಿಲ್ಲಾ ಪದಾಧಿಕಾರಿಗಳು ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಂಟ್ವಾಳ ಘಟಕದ ಅಧ್ಯಕ್ಷ ಪಿಯೂಸ್ ಮ್ಯಾಕ್ಸಿಂ ಸ್ವಿಕೇರಾ ಸ್ವಾಗತಿಸಿದರು.ಪ್ರ. ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್ ವಂದಿಸಿದರು.
ವರದ್ ರಾಜ್ , ಶ್ರೀನಿವಾಸ ಕಾರ್ಯಕ್ರಮ ನಿರೂಪಿಸಿದರು.