ಮಂಗಳೂರು: ನವೆಂಬರ್ 30ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ `ಕಿಸ್ ಆಫ್ ಲವ್’ ಠುಸ್ಸ್ ಆಗಿದ್ದಕ್ಕೆ ಮಂಗಳೂರು ನಗರದಲ್ಲಿ ಹಿಂದೂ ಮಹಾಸಭಾದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಿಸಿದರು.
ನಿನ್ನೆ ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಆದೇಶ ಹೊರಡಿಸಿದ್ದರು. ಇದರಿಂದ ಹಿಂದೂ ಸಂಘಟನೆಗಳಿಗೆ ಬಹಳ ಖುಷಿಯಾಗಿದೆ. ಹಿಂದೂ ಮಹಾಸಭಾದ ಪ್ರಣವಾನಂದ ಸ್ವಾಮೀಜಿ ಅವರು ಕೆಲದಿನಗಳ ಹಿಂದೆ ನಗರದಲ್ಲಿ ಪತ್ರಿಕಾಗೋಷ್ಠಿ ಕರೆದು ಕಿಸ್ ಆಫ್ ಲವ್ ನಡೆಸಲು ಬಿಡುವುದಿಲ್ಲ ಎಂದು ಹೇಳಿದ್ದರು.

