ಸಜೀಪ: ವನಮಹೋತ್ಸವ
ಬಂಟ್ವಾಳ: ಸಜೀಪಮೂಡ ಗ್ರಾಮದ ಸುಭಾಷ್ ಯುವಕ ಮಂಡಲ ( ರಿ) ಇದರ ಆಶ್ರಯದಲ್ಲಿ ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅವರು ರಸ್ತೆ ಬದಿಗಿಡ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು.ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ, ಉಪ ವಲಯ ಅರಣ್ಯ ಅಧಿಕಾರಿ ಯಶೋಧರ, ವನಪಾಲಕ ರೇಖಾ, ಸುಭಾಷ್ ಯುವಕ ಮಂಡಲದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಪ್ರವೀಣ್ ಆಳ್ವ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ. ಪಂಚಾಯಿತಿ ಸದಸ್ಯ ಯೋಗೇಶ್ ಬೆಳ್ಚಡಾ, ಶಾರದಾ ಪೂಜಾ ಸಮಿತಿ ಅಧ್ಯಕ್ಷ ವಸಂತ ಪೂಜಾರಿ ಬರ್ಕೆ, ಗಿರೀಶ್ ಕುಮಾರ್ ಪೆರ್ವ ಮೊದಲಾದವರು ಉಪಸ್ಥಿತರಿದ್ದರು