ಕಟ್ಟಡ ಕಾರ್ಮಿಕರಿಗೆ ಉಚಿತ ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ
ಬಂಟ್ವಾಳ :ಕಟ್ಟಡ ಕಾರ್ಮಿಕರಿಗೆ ಉಚಿತ ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರವು ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್ ಜಿಎಸ್ ಆರ್ ವೈ ಸಭಾಂಗಣದಲ್ಲಿ ನಢಯಿತು.ಸೀನಿಯರ್ ಛೇಂಬರ್ ಬಂಟ್ವಾಳ ನೇತ್ರಾವತಿ ಸಂಗಮ, ರೊಟರಿ ಕ್ಲಬ್ ಮೊಡಂಕಾಪು, ಪಿ.ಡಬ್ಲ್ಯೂ.ಡಿ ಗುತ್ತಿಗೆದಾರರ ಸಂಘ ಬಂಟ್ವಾಳ,ಕಾರ್ಮಿಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಾಗಾರವನ್ನು ಕುಂಬಾರ ಗುಡಿ ಕೈಗಾರಿಕಾ ಸಹಕಾರಿ ಸಂಘದ ನಿರ್ದೇಶಕ ಸೇಸಪ್ಪ ನಿರ್ಮಲ್ ಉದ್ಘಾಟಿಸಿದರು.

ಸೀನಿಯರ್ ಛೇಂಬರ್ ರಾಷ್ಟೀಯ ಉಪಾಧ್ಯಕ್ಷ ಹರಿಪ್ರಸಾದ್ ರೈ ಮಾಹಿತಿ ನೀಡಿದರು. ಮೊಡಂಕಾಪು ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಎಲಿಯಾಸ್ ಸಾಂಕ್ರಿಸ್, ಕಾರ್ಮಿಕ ನಿರೀಕ್ಷಕಿ ಗ್ರೇಸಿಯ ಡಿಸೋಜ, ರೋಟರಿ ಕಾರ್ಯದರ್ಶಿ ಅಲೆಗ್ಸಾಂಡರ್ ಲೋಬೋ, ಗುತ್ತಿಗೆದಾರ ಸಂಘದ ಕಾರ್ಯದರ್ಶಿ ಶಮೀರ್ ಪಜೀರು, ಸೀನಿಯರ್ ಛೇಂಬರ್ ಕೋಶಾಧಿಕಾರಿ ಸತ್ಯನಾರಾಯಣ ರಾವ್ ಉಪಸ್ಥಿತರಿದ್ದರು.
ಮಂಗಳೂರು ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೋರವರು ಸರಕಾರದಿಂದ ಕಾರ್ಮಿಕರಿಗೆ ಸಿಗುವ ಸವಲತ್ತುಗಳ ಕುರಿತಂತೆ ಮಾಹಿತಿ ನೀಡಿದರು. ಸೀನಿಯರ್ ಛೇಂಬರ್ ಅಧ್ಯಕ್ಷ ಡಾ.ಆನಂದ್ ಬಂಜನ್ ಸಭಾದ್ಯಕ್ಷತೆ ವಹಿಸಿದ್ದರು.
ರೋಟರಿ ಕ್ಲಬ್ ಮೊಡಂಕಾಪು ಅಧ್ಯಕ್ಷ ಪಿ.ಎ. ರಹೀಂ ಸ್ವಾಗತಿಸಿದರು, ಸೀನಿಯರ್ ಛೇಂಬರ್ ನಿಕಟ ಪೂರ್ವಾಧ್ಯಕ್ಷ ಜಯಾನಂದ ಪೆರಾಜೆ ಪ್ರಾಸ್ತಾವನೆಗೈದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ವಂದಿಸಿದರು.