ಜು. 31 ರಂದು ಬಿಜೆಪಿ ಪ್ರತಿಭಟನೆ ಬಂಟ್ವಾಳದಲ್ಲಿ ಪೂರ್ವ ಸಿದ್ದತಾ ಸಭೆ
ಬಂಟ್ವಾಳ: ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ನಡೆದಿರುವ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ದ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಜು. 31 ರಂದು ನಡೆಯುವ ಪ್ರತಿಭಟನೆಯ ಹಿನ್ನಲೆಯಲ್ಲಿ ಬಿ.ಸಿ.ರೋಡಿನಲ್ಲಿರುವ
ಬಿಜೆಪಿ ಬಂಟ್ವಾಳ ಮಂಡಲದ ಕಾರ್ಯಾಲಯದಲ್ಲಿ ಪೂರ್ವಸಿದ್ದತಾ ಸಭೆ ನಡೆಯಿತು.
ಬಿಜೆಪಿ ಬಂಟ್ಚಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮಾತನಾಡಿದ
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಡುಪಿ ಕಾಲೇಜಿನಲ್ಲಿ ನಡೆದ ಘಟನೆಯ ಬಗ್ಗೆ ರಾಜ್ಯದ ಕಾಂಗ್ರೆಸ್ ಸರಕಾರ ಲಘುವಾಗಿ ಪರಿಗಣಿಸಿರುವುದನ್ನು ಖಂಡಿಸಿದರು.
ಸರಕಾರದ ಈ ಧೋರಣೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಸೋಮವಾರ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ, ಡೊಂಬಯ ಅರಳ,ಬೂಡಾ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭಾ ಸದಸ್ಯ ಗೋವಿಂದ ಪ್ರಭು, ಕ್ಷೇತ್ರ ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು,ವಿವಿಧ ಮೋರ್ಚಾದ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು, ಪಂಚಾಯತ್ ಅಧ್ಯಕ್ಷರು, ಪುರಸಭಾ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು .