ಸುಂಕದಕಟ್ಟೆ: ಮಾದಕ ವ್ಯಸನದ ಜಾಗೃತಿ ಕಾರ್ಯಕ್ರಮ
ಬಜಪೆ: ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಾಗೂ ಉಪನ್ಯಾಸಕರೊಂದಿಗೆ ಸಂವಾದ ಕಾರ್ಯಕ್ರಮ ವು ಬಜಪೆ ಆರಕ್ಷಕ ಠಾಣೆಯ ಸಿಬ್ಬಂದಿಗಳ ನೇತೃತ್ವದಲ್ಲಿ ನಡೆಯಿತು.
ಬಜಪೆ ಆರಕ್ಷಕ ಠಾಣೆಯ ಪಿ.ಎಸ್.ಐ ಕುಮಾರೇಶ್, ಎ.ಎಸ್.ಐ ಗೋಪಾಲಕೃಷ್ಣ, ಪಿ.ಎಸ್.ಐ ಲತಾ ಕೆ.ಎನ್
ಹಾಗೂ ಕಾಲೇಜಿನ ಪ್ರಾಚಾರ್ಯರಾದ ಸುದಾಕರ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಡಾ.ಸುಧೀರ್ ನಾಯ್ಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.