Published On: Tue, Aug 1st, 2023

 ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ 

ಬಂಟ್ವಾಳ:ಬಿಲ್ಲವ ಮಹಿಳೆಯರು ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಇದರ ಜೊತೆಗೆ ಸಾಹಿತ್ಯ ಕ್ಷೇತ್ರಗಳಲ್ಲೂ ಮುಂದೆ ಬರಬೇಕು ಇದಕ್ಕೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಬಿಲ್ಲವ ಮಹಿಳಾ ಸಮಿತಿಯ ಮೂಲಕ ಹಮ್ಮಿಕೊಳ್ಳಬೇಕು ಎಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲೆ ಡಾ. ಆಶಾಲತಾ ಸುವರ್ಣ ಸಲಹೆ ನೀಡಿದರು.

ಬಿ.ಸಿ.ರೋಡಿನ‌ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣ ಸಭಾಂಗಣದಲ್ಲಿ  ನಡೆದ‌ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಇದರ ನೂತನ ಅಧ್ಯಕ್ಷೆ ಶೈಲಜಾ ರಾಜೇಶ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು‌ಉದ್ಘಾಟಿಸಿ ಅವರು ಮಾತನಾಡಿದರು.   ನೂತನ ಅಧ್ಯಕ್ಷೆ ಶೈಲಜಾ ರಾಜೇಶ್ ಸಭಾಧ್ಯಕ್ಷತೆ ವಹಿಸಿದ್ದರು.


 ಪುತ್ತೂರಿನ ಶಿಶು ಕಲ್ಯಾಣಾಧಿಕಾರಿ ಶ್ರೀಲತಾ, ಉದ್ಯಮಿ ಸಾರಿಕ ಪೂಜಾರಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ,ದ.ಕ. ಜಿಲ್ಲಾ ಮೂರ್ತೆದಾರ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಅತಿಥಿಗಳಾಗಿ  ಭಾಗವಹಿಸಿ ಶುಭ ಹಾರೈಸಿದರು. ಬಿಲ್ಲವ ಮಹಿಳಾ ಸಮಿತಿಯ ನಿಕಟ ಪೂರ್ವಾಧ್ಯಕ್ಷೆ ರೇವತಿ ಅನಿಸಿಕೆ ವ್ಯಕ್ತಪಡಿಸಿದರು.
ಇದೇ ವೇಳೆ ಮಹಿಳಾ ಮತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಭಾರತಿ ಕುಂದರ್, ನಿಕಟಪೂರ್ವಾಧ್ಯಕ್ಷೆ ರೇವತಿ, ಬ್ರಹ್ಮಶ್ರೀ ನಾರಾಯಣ ಸಭಾಭವನದ ಮ್ಯಾನೇಜರ್ ಜಯಶ್ರೀ ಅವರನ್ನು ಸನ್ಮಾನಿಸಲಾಯಿತು. ಸಮುದಾಯದ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲಾಯಿತು. ಕಾರ್ಯದರ್ಶಿ ಸರೋಜಿನಿ ವಂದಿಸಿದರು. ಭಾರತಿ ಕುಂದರ್ ಹಾಗೂ ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಂಭವಿ ಕಿರುಚಿತ್ರ ಪ್ರದರ್ಶನ, ಶ್ರೀಶೈಲಾ ಕಲಾನೃತ್ಯ ತಂಡ ಸಹಿತ ಮತ್ತಿತರರಿಂದ ನೃತ್ಯ ಪ್ರದರ್ಶನ, ವಿಠಲ ನಾಯಕ್ ಮತ್ತು ಬಳಗದಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter