ದಲಿತ ಬಾಲಕಿಯೋರ್ವಳ ಮೇಲಿನ ಲೈಂಗಿಕ ದೌರ್ಜನ್ಯ : ಕಾಂಗ್ರೆಸ್ ಖಂಡನೆ
ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯೋರ್ವಳ ಮೇಲೆ ಇತ್ತೀಚೆಗೆ ನಡೆಸಲಾದಲೈಂಗಿಕ ದೌರ್ಜನ್ಯ ಘಟನೆಯನ್ನು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ತೀವ್ರವಾಗಿ ಖಂಡಿಸುತ್ತದೆ.ಈ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ಬುಧವಾರ ಪಾಣೆಮಗಳೂರು ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಗ್ಯಾಂಗ್ ರೇಪ್ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಸಮಾಜದ ರಕ್ಷಣೆ ಮಾಡಬೇಕಾದ ಬಿಜೆಪಿ ಮತ್ತು ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಅಲ್ಲಲ್ಲಿ ನೈತಿಕ ಗೂಂಡಗಿರಿ ಮಾಡುವುದು ಕಂಡುಬಂದಿದೆ.ಇದನ್ನು ಖಂಡಿಸಬೇಕಾದ ಅವರ ಮುಖಂಡರು ಮೌನವಾಗಿದ್ದಾರೆ ಎಂದ ರೈ ಅವರು ಇಂತಹ ಘಟನೆಗಳು ಸಮಾಜದಲ್ಲಿ ಅಶಾಂತಿಗೆ ಪ್ರೇರಣೆಯಾಗುತ್ತದೆ. ಹಾಗಾಗಿ ಇಂತಹ ಸಮಾಜಘಾತುಕ ಶಕ್ತಿಗಳ ಮೇಲೆ ಪೊಲೀಸರು ನಿರ್ದಾಕ್ಷಿಣ್ಯವಾದ ಕ್ರಮಕೈಗೊಳ್ಳುಬೇಕೆಂದು ಒತ್ತಾಯಿಸಿದರು.
ಈಚೆಗೆ ಬಿ.ಸಿ.ರೋಡಿನಲ್ಲಿ ಪೋಲೀಸ್ ಕಾನ್ಸ್ ಟೇಬಲ್ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೂ ನೈತಿಕ ಗೂಂಡಗಿರಿ ನಡೆದಿದೆ.ಇಂತಹ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಪೊಲೀಸ್ ಇಲಾಖೆ ಹಾಗೂ ನಾಗರಿಕ ಸಮಾಜದ ನಮ್ಮೆಲ್ಲರ ಜವಬ್ದಾರಿಯು ಆಗಿದೆ ಎಂದರು.
ಮಾದಕ ದ್ರವ್ಯದ ವಿರುದ್ಧ ಅಭಿಯಾನ:
ಮಾದಕ ದ್ರವ್ಯ , ವಸ್ತುಗಳ ಸೇವನೆಯಿಂದಾಾಾಗಿಗ ಸಮಾಜದಲ್ಲಿ ಕಾನೂನು ಬಾಹಿರ ಕೃತ್ಯಗಳು ಹೆಚ್ಚಲು ಕಾರಣವು ಒಂದಾಗಿದೆ ಎಂದು ಅಭಿಪ್ರಾಯ ಪಟ್ಟ ರೈ ಅವರು ಇದರ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕು ಸಹಿತ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನ ನಡೆಸುವ ಅಗತ್ಯವಿದೆ.ಈ ನಿಟ್ಟಿನಲ್ಲಿ ವಿವಿಧ ಸಾಮಾಜಿಕ ಕಳಕಳಿಯ ಸಂಘಟನೆಯ ಸಹಕಾರ ಪಡೆದು ಕಾರ್ಯಕ್ರಮ ರೂಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್, ಜಿ.ಪಂ.ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ ತಾ.ಪಂ.ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ನಿಕಟಪೂರ್ವ ಅಧ್ಯಕ್ಷ ಮಹಮ್ಮದ್ ಶರೀಫ್, ಪ್ರಮುಖರಾದ ಮಹಮ್ಮದ್ ನವಾಜ್, ಸದಾಶಿವ ಬಂಗೇರ, ಬಾಲಕೃಷ್ಣ ಆಳ್ವ, ಸುರೇಶ್ ಜೋರಾ ಮತ್ತಿತರರಿದ್ದರು.