ಶಾಲಾ ಸಂಸತ್ತಿನ ಸದಸ್ಯರಿಗೆ ತರಬೇತಿ ಕಾರ್ಯಾಗಾರ
ಬಂಟ್ವಾಳ: ತಾಲೂಕಿನ ಪೆರಾಜೆ ಗ್ರಾಮದ ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಸದಸ್ಯರಿಗೆ ತರಬೇತಿ ಕಾರ್ಯಾಗಾರ ನಡೆಯಿತು.ನಿವೃತ್ತ ಪ್ರೌಢ ಶಾಲಾ ಶಿಕ್ಷಕರಾದ ಗುಡ್ಡಪ್ಪ ಬಲ್ಯರವರು ತರಬೇತಿ ನೀಡುತ್ತಾ ವಿದ್ಯಾರ್ಥಿಗಳು ದಿನನಿತ್ಯ ವಾರ್ತಾ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಆ ಮೂಲಕ ನಮ್ಮ ರಾಜ್ಯ ಹಾಗೂ ದೇಶದ ಆಗು ಹೋಗುಗಳ ಬಗ್ಗೆ ಮಾಹಿತಿಗಳನ್ನು ದಿನನಿತ್ಯ ಕೆಲಹಾಕಿಕೊಳ್ಳಲು ಸಹಕಾರಿಯಾಗುವುದು ಎಂದರು.
ಬಳಿಕ ಸಂಸತ್ತಿನಲ್ಲಿ ನಡೆಯುವ ಅಧಿವೇಶನದ ಕಾರ್ಯಕಲಾಪಗಳು, ಸಭಾಧ್ಯಕ್ಷರ ಭಾಷಣ ಸಹಿತ ಅಲ್ಲಿ ನಡೆಯುವ ಎಲ್ಲಾ ವಿಚಾರಗಳ ಬಗ್ಗೆ ಮಾಹಿತ ನೀಡಿದರು. ತರಬೇತಿ ಕಾರ್ಯಾಗಾರದ ಬಳಿಕ ಶಾಲಾ ಅಣಕು ಸಂಸತ್ತಿನ ಅಧಿವೇಶನ ನಡೆಯಿತು.
ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆರವರು ಮಾತನಾಡಿ ಶಾಲೆಯಲ್ಲಿ ಮುಂದೆ ನಡೆಯವ ಶಾಲಾ ಸಂಸತ್ತಿನ ಅಧಿವೇಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ನಾಯಕರಾಗುವ ಮನೋಭಾವವನ್ನು ಬೆಳಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳಾದ ವೃದ್ಧಿ ಕೊಂಡೆ ಮತ್ತು ಪ್ರಕೃತಿ ಶೆಟ್ಟಿ ತರಬೇತಿ ಕಾರ್ಯಾಗಾರದ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾದ್ಯಾಯಿನಿ ವಿಜಯಲಕ್ಷ್ಮಿ ವಿ.ಶೆಟ್ಟಿ ಸ್ವಾಗತಿಸಿ, ಸಹಶಿಕ್ಷಕಿ ಸೌಮ್ಯ ವಂದಿಸಿ, ಸಹಶಿಕ್ಷಕಿ ಸಪ್ನಾ ಕಾರ್ಯಕ್ರಮ ನಿರೂಪಿಸಿದರು.