ಬಿಲ್ಲವರ ಸೌಹಾರ್ದ ಕುಟುಂಬ ಮಿಲನ ೨೦೨೩ ‘ಕಾರ್ಯಕ್ರಮ
ಬಂಟ್ವಾಳ: ಬಿರುವೆರ್ ಸೇವಾ ಟ್ರಸ್ಟ್ ನರಿಕೊಂಬು ಬಂಟ್ವಾಳ ಇದರ ಆಶ್ರಯದಲ್ಲಿ ಭಾನುವಾರ ಬಿಲ್ಲವರ ಸೌಹಾರ್ದ ಕುಟುಂಬ ಮಿಲನ ೨೦೨೩ ‘ಕಾರ್ಯಕ್ರಮ ನರಿಕೊಂಬುವಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುರೋಹಿತರಾದ ಕೇಶವ ಶಾಂತಿ ಹಾಗೂ ವೆಂಕಟೇಶ್ ಶಾಂತಿ ಉದ್ಘಾಟಿಸಿದರು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ. ರಮಾನಾಥ ರೈ, ಟ್ರಸ್ಟ್ ನ ಅಧ್ಯಕ್ಷ ಸೀತಾರಾಮ ಪೂಜಾರಿ ಸಹಿತ ವಿವಿಧ ಬಿಲ್ಲವ ಸಂಘಟನೆಗಳ ಅಧ್ಯಕ್ಷರು, ಉದ್ಯಮಿಗಳು, ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರಮದಂಗವಾಗಿ ಕೆಸರು ಗದ್ದೆಯಲ್ಲಿ ವಿವಿಧ ಕ್ರೀಡಾಕೂಟಗಳು ನಡೆಯಿತು.