ಲಂಚಕ್ಕೆ ಬೇಡಿಕೆ : ಕೃಷಿ ಸಚಿವರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಬಂಟ್ವಾಳ: ಮಂಡ್ಯ ಜಿಲ್ಲೆಯ ಏಳು ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟೊರುವ ರಾಜ್ಯ ಕೃಷಿ ಸಚಿವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡ,ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಕರ್ನಾಟಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಲ್ಲಿ ಸುಮಾರು 8-10 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿರುವ ಪ್ರಕರಣದ ಹಿನ್ನೆಲೆಯಲ್ಲಿ ಅಸಹಾಯಕರಾದ ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿ ಕೃಷಿ ಸಚಿವರಾದ ಚೆಲುವರಾಯ ಸ್ವಾಮಿ ಅವರ ವಿರುದ್ದ ಕಾನೂನು ಕ್ರಮಕ್ಕಾಗಿ ಒತ್ತಾಯ ಪಡಿಸಿರುವ ವಿಚಾರ ದೂರಿನ ಪ್ರತಿ ಸಹಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದು,
ಕೃಷಿ ಇಲಾಖೆಯ ಅಧಿಕಾರಿಗಳೇ ಕೃಷಿ ಸಚಿವರ ವಿರುದ್ದ ದೂರು ನೀಡಿರುವುದನ್ನು ಗಂಭೀರ ಪ್ರಕರಣವೆಂದು ಪರಿಗಣಿಸಬೇಕು ಎಂದು ಪ್ರಭು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಹಾಗಾಗಿ ರಾಜ್ಯಪಾಲರು ಮುಖ್ಯ ಮಂತ್ರಿಗಳಿಗೆ ಸೂಚನೆ ನೀಡುವ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿರುವ ಕೃಷಿ ಸಚಿವರನ್ನು ತಕ್ಷಣವೇ ಸಂಪುಟದಿಂದ ವಜಾ ಗೊಳಿಸುವಂತೆ ಪ್ರಭು ಮನವಿಯಲ್ಲಿ ಆಗ್ರಹಿಸಿದ್ದಾರೆ.