ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್ ಇನ್ನಿಲ್ಲ
ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪಿ. ಜಯರಾಂ ಭಟ್ ನಿಧನ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಬುಧವಾರ ಮಧ್ಯಾಹ್ನ ಮುಂಬಯಿAದ ವಿಮಾನದಲ್ಲಿ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಸಂದರ್ಭ ಎದೆ ನೋವು ಕಾಣಿಸಿಕೊಂಡ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದರು.
ಪಿ. ಜಯರಾಂ ಭಟ್ ನಿಧನಕ್ಕೆ ಕರ್ಣಾಟಕ ಬ್ಯಾಂಕ್ ನ ಆಡಳಿತ ಮಂಡಳಿ ಮತ್ತು ಸಿಬಂದಿ ವರ್ಗ, ಸಮಾಜದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗುರುವಾರ ಬೆಳಗ್ಗೆ ೮ ರಿಂದ ೯ ಗಂಟೆಯ ತನಕ ಎ.ಜೆ. ಆಸ್ಪತ್ರೆಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರದ ಆಂತ್ಯ ವಿಧಿಗಳು ಮಂಗಳೂರಿನ ಕದ್ರಿ ರುಧ್ರಭೂಮಿಯಲ್ಲಿ ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.