ಅಮ್ಮುಂಜೆ ಅಧ್ಯಕ್ಷರಾಗಿ ಲಕ್ಷ್ಮಿಉಪಾಧ್ಯಕ್ಷರಾಗಿ ರಾಧಾಕೃಷ್ಣ ತಂತ್ರಿ ಪೊಳಲಿ ಆಯ್ಕೆ
ಅಮ್ಮುಂಜೆ: ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು.ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರೆ, ಬಿಜೆಪಿ ಬೆಂಬಲಿತ ಸದಸ್ಯ ರಾಧಾಕೃಷ್ಣ ತಂತ್ರಿ ಪೊಳಲಿ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 13 ಸದಸ್ಯ ಬಲ ಹೊಂದಿರುವ ಇಲ್ಲಿ 10 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದು,ಇಬ್ಬರು ಎಸ್ ಡಿ ಪಿ ಐ ಹಾಗೂ ಒರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ.ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆಯ ವೇಳೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಗೈರು ಹಾಜರಾಗಿದ್ದರೆ ,ಎಸ್ ಡಿಪಿ ಐ ಬೆಂಬಲಿತ ಸದಸ್ಯೆ ಉಪಾಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. 10 ಸದಸ್ಯ ಬಲದೊಂದಿಗೆ ರಾಧಕೃಷ್ಣ ತಂತ್ರಿ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಯಪ್ರಕಾಶ್ ಅವರು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿದರು.ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶಾಸಕ ರಾಜೇಶ್ ನಾಯ್ಕ್ ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿಅಭಿನಂದನೆ ಸಲ್ಲಿಸಿದ್ದಾರೆ.