ಕರಿಯಂಗಳ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ
ರಾಧಾ ಲೋಕೇಶ್ , ಉಪಾಧ್ಯಕ್ಷ ರಾಜು ಕೋಟ್ಯಾನ್
ಕೈಕಂಬ : ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆ. ೯ ರಂದು ಗುರುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಾಧಾ ಲೋಕೇಶ್ ಕರಿಯಂಗಳ ಮತ್ತು ಉಪಾಧ್ಯಕ್ಷರಾಗಿ ರಾಜು ಕೋಟ್ಯಾನ್ ಪಲ್ಲಿಪಾಡಿ ಅವಿರೋಧವಾಗಿ ಆಯ್ಕೆಯಾದರು. ಇವರಿಬ್ಬರೂ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದಾರೆ.

ಒಟ್ಟು ೧೨ ಸದಸ್ಯ ಬಲದ ಪಂಚಾಯತ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ೮, ಬಿಜೆಪಿ ಬೆಂಬಲಿತ ೩ ಮತ್ತು ಎಸ್‌ಡಿಪಿಐ ಬೆಂಬಲಿತ ಒಬ್ಬರು ಸದಸ್ಯರಿದ್ದಾರೆ. ಬಂಟ್ವಾಳ ತಾಲೂಕು ಪಿಡಬ್ಲ್ಯೂಡಿ ಇಲಾಖೆಯ ಎಇಇ ತಾರನಾಥ ಟಿ. ಸಾಲ್ಯಾನ್ ಚುನಾವಣಾಧಿಕಾರಿಯಾಗಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಿಡಿಒ ಮಾಲಿನಿ ಹಾಗೂ ಸಿಬ್ಬಂದಿ ಸಹಕರಿಸಿದರು. ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರಿಗೆ ಮಾಜಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಮತ್ತು ಉಪಾಧ್ಯಕ್ಷೆ ವೀಣಾ ಆಚಾರ್ಯ ಅಭಿನಂದಿಸಿದರು.

ಕರಿಯಂಗಳ ಗ್ರಾಮಸ್ತರಿಂದ ಅಭಿನಂದನೆಗಳ ಮಹಾಪೂರವೆ ಹರಿದು ಬಂತು.



