ಸಂಗಬೆಟ್ಟು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ರಾಜೀವಿ ಕೋಟಿಯಪ್ಪ ಪೂಜಾರಿ,ಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್ ಆಯ್ಕೆ
ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ರಾಜೀವಿ ಕೋಟಿಯಪ್ಪ ಪೂಜಾರಿ ಹಾಗೂಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಪಂಚಾಯತ್ ಸಭಾಭವನದಲ್ಲಿ ನಡೆದ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರದೀಪ್ ಡಿ’ಸೋಜ ನಡೆಸಿದರು. ಪಿಡಿಒ ಮತ್ತು ಸಿಬ್ಬಂದಿಗಳು ಸಹಕರಿಸಿದರು.