ಬಂಟ್ವಾಳ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕವಾಗಿದೆ ಎಂದು ನಿವೃತ್ತ ಶಿಕ್ಷಕ  ಸುರೇಶ ಶೆಟ್ಟಿ ಹೇಳಿದ್ದಾರೆ.


ಮಾಣಿಯ ಬಾಲವಿಕಾಸ ಶಾಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆಯ ಜೊತೆಗೆ ಮೇಲ್ದರ್ಜೆಗೇರಿಸಲಾದ  ಪ್ರಯೋಗಾಲಯವನ್ನು ಲೋಕಾರ್ಪಣೆಗೈದು ಅವರು ಮಾತನಾಡಿದರು.


ಕಂಪ್ಯೂಟರ್ ಶಿಕ್ಷಣದ  ಅತೀ ಜೊತೆಗೆ ವಿದ್ಯಾರ್ಥಿಗಳು ಪುಸ್ತಕ ಹಾಗೂ ದಿನ ಪತ್ರಿಕೆಗಳನ್ನು ಓದುವುದರೋದಿಗೆ ತಮ್ಮ ಸಾಮಾನ್ಯ ಜ್ಞಾನವನ್ನು ವೃದ್ದಿಸಿಕೊಳ್ಳಬೇಕೆಂದರು.

ಪ್ರಹ್ಲಾದ್ ಶೆಟ್ಟಿ ಜೆ, ಮಹೇಶ್  ಶೆಟ್ಟಿ ಜೆ,ವಿಜಯಲಕ್ಷ್ಮಿ ವಿ ಶೆಟ್ಟಿ, ಕಂಪ್ಯೂಟರ್ ಶಿಕ್ಷಕರಾದ ಸೌಮ್ಯ ಕೆ, ಐವನ್ ಡಿ ಕುನ್ಹ,ಜೀವಿತ ಕೆ,ಶಿಕ್ಷಕರು  ಉಪಸ್ಥಿತರಿದ್ದರು.ರವೀಂದ್ರ ದರ್ಬೆ ಸ್ವಾಗತಿಸಿ, ವಿಜಯಲಕ್ಷ್ಮಿ ವಿ ಶೆಟ್ಟಿ ವಂದಿಸಿದರು. 

By Suddi9

Leave a Reply

Your email address will not be published. Required fields are marked *