ಬಂಟ್ವಾಳ ಎಸ್ .ವಿ .ಎಸ್ ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’
ಬಂಟ್ವಾಳ:ಬಂಟ್ವಾಳ ಎಸ್ .ವಿ .ಎಸ್ ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ನಡೆಯಿತು.
ಶಾಲಾ ಸಂಚಾಲಕರಾದ ಭಾಮಿ ನಾಗೇಂದ್ರನಾಥ್ ಶೆಣೈ ಅವರು ಹಲಸಿನ ಹಣ್ಣನ್ನು ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಲಾ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರಾದ ವಸಂತ್ ಮಲ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು. ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿ’ಸೋಜ, ಸಹ ಮುಖ್ಯೋಪಾಧ್ಯಾಯಿನಿ ಶ ಜಾನಕಿ ರಾಜೇಶ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿನಿ ಶ್ರೀನಿಧಿ ಅವರು ತುಳುವಿನಲ್ಲೇ ನಿರರ್ಗಳವಾಗಿ ಮಾತನಾಡಿ ತುಳು ಸಂಸ್ಕೃತಿ,ಆಚಾರ,ವಿಚಾರ ಹಾಗೂ ಆಟಿಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಔಷಧೀಯ ಸಸ್ಯಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಆಟಿ ತಿಂಗಳಿನಲ್ಲಿ ಮಾಡುವ ವಿವಿಧ ಬಗೆಯ ಖಾದ್ಯಗಳನ್ನು ವಿದ್ಯಾರ್ಥಿಗಳು ಸವಿದು ಸಂಭ್ರಮಿಸಿದರು.
ವಿದ್ಯಾರ್ಥಿಗಳ ‘ಅಟಿಕಳಂಜ’ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳುಗಮನಸೆಳೆಯಿತು.