ಜಂಪ್ ರೂಪ್ ನಲ್ಲಿ ಪ್ರಥಮ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ಗುರುನಂದನ್ ರೈ ಜಂಪ್ ರೂಪ್ ನಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಜಂಪ್ ರೋಪ್ ಸ್ಪರ್ಧೆಗೆ ಆಯ್ಕೆಯಾಗಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಇವರು ಬಾಕ್ರಬೈಲು ನಿವಾಸಿ ತನುಜಾಕ್ಷಿ ಹಾಗೂ ಶಶಿಧರ್ ರೈ ದಂಪತಿಯ ಪುತ್ರರಾಗಿದ್ದಾರೆ.ಇವರಿಗೆ ಅಧ್ಯಕ್ಷರು, ಸಂಚಾಲಕರು ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದರು.