ರಾಯಿ ಗ್ರಾ.ಪಂ.ಗೆ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ
ಬಂಟ್ವಾಳ:ತಾಲೂಕಿನ ರಾಯಿ ಗ್ರಾಮ ಪಂಚಾಯತ್ ನ ಎರಡನೆ ಅವಧಿಗೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ರಾಯಿ ಬೆಟ್ಟು ಹಾಗೂ ಉಪಾಧ್ಯಕ್ಷರಾಗಿ ಗುಣವತಿ ರಾಜೇಶ್ ನೀರಲ್ಕೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು 10 ಹಾಗೂ 1 ಕಾಂಗ್ರೆಸ್ ಬೆಂಬಲಿತ ಸೇರಿಒಟ್ಟು 11 ಸದಸ್ಯ ಬಲವನ್ನು ಹೊಂದಿದೆ.
ಸೋಮವಾರ ಗ್ರಾ.ಪಂ.ಸಭಾಭವನದಲ್ಲಿ ಬಂಟ್ವಾಳ ತೋಟಗಾರಿಕಾ ಸಹಾಯಕ ನಿರ್ದೇಶಕ ದಿನೇಶ್ ಅವರು ನೂತನ ಅಧ್ಯಕ್ಷ ,ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಿದರು.ಪಿಡಿಒ ಹಾಗೂ ಸಿಬ್ಬಂದಿಗಳು ಸಹಕರಿಸಿದರು.