ಬೊಳಂತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲಿನ ಡೈರಿಗೆ ಶ್ರೀ ಕ್ಷೇ. ಧ.ಗ್ರಾ.ಯೋ.ಯಿಂದ 2 ಲಕ್ಷ ರೂ.ಮಂಜೂರು
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ (ರಿ)ಯ “ಗ್ರಾಮ ಕಲ್ಯಾಣ ಯೋಜನೆಯ” ಕಾರ್ಯಕ್ರಮ ದಡಿಯಲ್ಲಿ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಬೊಳಂತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲಿನ ಡೈರಿಗೆ ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ 2 ಲಕ್ಷ ರೂ.ವಿನ ಮಂಜೂರು ಪತ್ರವನ್ನು ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಶೆಟ್ಟಿ ಅವರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ರೈ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯೋಜನೆಯ ಕಲ್ಲಡ್ಕ ವಲಯದ ಅಧ್ಯಕ್ಷೆ ತುಳಸಿ, ಬೋಳಂತೂರು ಒಕ್ಕೂಟ ಅಧ್ಯಕ್ಷೆ ಸೀತಾ, ಒಕ್ಕೂಟ ಸೇವಾ ಪ್ರತಿನಿಧಿ ಲೀಲಾವತಿ, ಒಕ್ಕೂಟ ಪದಾಧಿಕಾರಿಗಳಾದ ಸುಧಾಮಣಿ, ಬಿ ಮಹಮ್ಮದ್, ಸದಸ್ಯರಾದ ನಾರಾಯಣ ಟೈಲರ್, ಚಂದ್ರಶೇಖರ್, ಹಾಲು ಉತ್ಪಾದಕರ ಸಂಘದ ನಿರ್ದೇಶಕರು, ಕಾರ್ಯದರ್ಶಿ ಮೊದಲಾದವರು ಉಪಸ್ಥಿತರಿದ್ದರು.