ಪೊಳಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ
ಪೊಳಲಿ: ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ)ಮಂಗಳೂರು. ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನದ ಅಂಗವಾಗಿ ಆ.೧೭ರಂದು ಗುರುವಾರ ಪೊಳಲಿ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಪ್ರಾರಂಭಗೊಂಡಿತು.
ಯಕ್ಷ ಶಿಕ್ಷಣ ಸಲಹಾ ಸಮಿತಿಯ ಸದಸ್ಯರಾದ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಸಿಂಹ ಸಂಕ್ರಮಣದ ಪರ್ವಕಾಲದಲ್ಲಿ ಪ್ರಾರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯು ಅತ್ಯಂತ ಯಶಸ್ವಿಯಾಗಿ ನೆರವೇರಲಿ, ಊರಿನ ಶಾಲೆಯ ಕೀರ್ತಿಪತಾಕೆಯು ಎಲ್ಲೆಡೆ ವ್ಯಾಪಿಸಲಿ ಎಂದು ಶುಭ ಹಾರೈಸಿದರು.
ಯಕ್ಷದ್ರುವ ಯಕ್ಷ ಶಿಕ್ಷಣದ ಸಂಚಾಲಕರಾದ ವಾಸುದೇವ ಐತಾಳರು ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ವೆಂಕಟೇಶ ನಾವಡ ಪೊಳಲಿ , ಪಟ್ಲ ಫೌಂಡೇಷನ್ ಕೇಂದ್ರ ಸಮಿತಿಯ ಸದಸ್ಯರಾದ ರಾಜೀವ ಪೂಜಾರಿ, ಲೋಕೇಶ್ ಭರಣಿ, ಯಕ್ಷಗಾನ ಕಲಾವಿದ ಮೋಹನ್ ಅಮುಂಜೆ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಜಾನೆಟ್ ಲೋಬೊ ಸ್ವಾಗತಿಸಿದರು ಶಿಕ್ಷಕಿ ರಂಜಿತಾ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.