ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಸಮಾಜ, ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ ಕುರಿತ ಕಾರ್ಯಾಗಾರ
ಬಂಟ್ವಾಳ:ಸಿದ್ದಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯ್ಯಾಂಟಿ ಡ್ರಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ರೇಂಜರ್, ಯೂತ್ ರೆಡ್ ಕ್ರಾಸ್ ಮತ್ತು ಇಕೋ ಕ್ಲಬ್ ಗಳ ಆಶ್ರಯದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ, ಪೋಕ್ಸೋ ಕಾಯ್ದೆ, ರಸ್ತೆ ಸುರಕ್ಷತೆ ಕುರಿತ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಭಾರತಿ ಅವರು ಪೋಕ್ಸೋ ಕಾಯ್ದೆ ಹಾಗೂ ಪೊಲೀಸ್ ಇಲಾಖೆಯ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.ಅದೇ ರೀತಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹನಮಂತ ಅವರು ರಸ್ತೆ ಸುರಕ್ಷತೆ ಹಾಗೂ ಮೊಬೈಲ್ ಬಳಕೆಯಿಂದಾಗುವ ಸಾಧಕ ಬಾಧಕಗಳ ಕುರಿತು ಮಾಹಿತಿ ನೀಡಿದರು.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಅಜಯ್ , ಸಹದೇವ್ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಉದಯಕುಮಾರ್ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ ಪ್ರಾಸ್ತಾವಿಸಿ, ಸ್ವಾಗತಿಸಿದರು. ಎನ್ಎಸ್ಎಸ್ ಸಂಯೋಜನಾಧಿಕಾರಿ ಶೀನಪ್ಪ .ಎನ್ ವಂದಿಸಿದರು. ಕನ್ನಡ ಉಪನ್ಯಾಸಕರಾದ ಸಂಜಯ್ ಬಿ.ಎಸ್ ಕಾರ್ಯಕ್ರಮ ನಿರೂಪಿಸಿದರು.