ಬಾಳ್ತಿಲ ಗ್ರಾ.ಪಂ.ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ
ಬಂಟ್ವಾಳ: ಬಾಳ್ತಿಲ ಗ್ರಾ.ಪಂ.ನ ನೂತನ ಅಧ್ಯಕ್ಷ ಅಣ್ಣು ಪೂಜಾರಿ ಬಿ.ಕೆ. ಹಾಗೂ ಉಪಾಧ್ಯಕ್ಷೆ ರಂಜಿನಿ ಅವರ ಪದಗ್ರಹಣ ಸಮಾರಂಭ ಶುಕ್ರವಾರ ಬಾಳ್ತಿಲ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಜಿ.ಪಂ.ಮಾಜಿ ಸದಸ್ಯ ಚೆನ್ನಪ್ಪ ಆರ್.ಕೋಟ್ಯಾ ಕೋಟ್ಯಾನ್ತಾ .ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅವರು ಮಾತನಾಡಿ ಶುಭಹಾರೈಸಿದರು.
ವೇದಿಕೆಯಲ್ಲಿ ಗ್ರಾ.ಪಂ.ನಿಕಟಪೂರ್ವ ಉಪಾಧ್ಯಕ್ಷೆ ಜ್ಯೋತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಧ್ಯಾ, ಕಾರ್ಯದರ್ಶಿ ಸುರೇಖಾ, ಗ್ರಾಮ ಆಡಳಿತ ಅಧಿಕಾರಿ ಯಶ್ವಿತಾ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ರಾಮಣ್ಣ ಶೆಟ್ಟಿ, ಯಮುನಾ, ಮರಾಠಿ ಸಮಾಜದ ಅಧ್ಯಕ್ಷ ಕೇಶವ ನಾಯ್ಕ್,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಲೀಲಾವತಿ,
ಆರೋಗ್ಯ ಸುರಕ್ಷಾಧಿಕಾರಿ ಸರಸ್ವತಿ, ಗ್ರಾ.ಪಂ.ಸದಸ್ಯರು, ಮಾಜಿ ಸದಸ್ಯರು ಮೊದಲಾದವರಿದ್ದರು.
ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷೆ ಹಿರಣ್ಮಯಿ ಸ್ವಾಗತಿಸಿದರು. ಗ್ರಾ.ಪಂ.ಸದಸ್ಯ ವಿಠಲ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.