ಧರ್ಮಸ್ಥಳ ಸ್ವ ಸಹಾಯ ಸಂಘದ ಪ್ರತಿನಿಧಿಗಳಿಂದ ಪ್ರಾರ್ಥನೆ
ಬಂಟ್ವಾಳ ತಾಲ್ಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವ ಸಹಾಯ ಸಂಘದ ಪ್ರತಿನಿಧಿಗಳು ಶುಕ್ರವಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸೌಜನ್ಯಾ ಕೊಲೆಗೆ ನ್ಯಾಯ ಸಿಗಬೇಕು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಅಂಟಿರುವ ಕಳಂಕ ದೂರವಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಿದರು. ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಯೋಜನೆ ಮೇಲ್ವಿಚಾರಕಿ ಸವಿತಾ, ಸೇವಾ ಪ್ರತಿನಿಧಿಗಳು ಮತ್ತಿತರರು ಇದ್ದರು.