ಎಡಪದವು ವರಮಹಾಲಕ್ಷ್ಮೀ ವೃತದ ಪೂಜೆ
ಕೈಕಂಬ: ಎಡಪದವು ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿ ಇದರ ೨೧ ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತದ ಪೂಜೆಯು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಆ.೨೫ ರಂದು ಶುಕ್ರವಾರ ಮಧ್ಯಾಹ್ನ ೧೨ ಗಂಟೇಗೆ ನಡೆಯಲಿದೆ.

ಬೆಳಗ್ಗೆ ೯.೩೦ಕ್ಕೆ ಶ್ರೀ ವರಮಹಾಲಕ್ಷ್ಮೀ ಕಲಶ ಪ್ರತಿಷ್ಠೆ ಬೆಳಗ್ಗೆ ೧೦ ಗಂಟೆಗೆ ಶ್ರೀ ನಾದಪ್ರಿಯ ಭಜನಾ ತಂಡ ಕೈಕಂಬ ಇವರಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ೧೨ ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದುಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿಯ ಪ್ರಕಟನೆ ತಿಳಿಸಿದೆ.