ಸೌಜನ್ಯ ಕೊಲೆ ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಸಜೀಪದಲ್ಲಿ ಪ್ರತಿಭಟನೆ
ಬಂಟ್ವಾಳ: ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗದಳ ಸಜಿಪ ವಲಯ ಆಶ್ರಯದಲ್ಲಿ ವಿದ್ಯಾರ್ಥಿನಿ ಸೌಜನ್ಯ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಜಂಕ್ಷನ್ ನಲ್ಲಿ ಸೋಮವಾರ ಸಂಜೆ ನಡೆಯಿತು.

ಸಜಿಪ ಮಾಗಣೆಯ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್ ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯಿತ್ ನ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಎಸ್ ಶ್ರೀಕಾಂತ್ ಶೆಟ್ಟಿ,ಸೌಜನ್ಯನ ತಾಯಿ ಕುಸುಮಾವತಿ,ಸಹೋದರಿ ಸೌಂಧರ್ಯ, ಮಾವ ಗಿರೀಶ್ ಗೌಡ ಹಾಗೂ ರವಿಕುಮಾರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಅರುಣ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು