ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಗೆ ಪ್ರಶಸ್ತಿ
ಬಂಟ್ವಾಳ: 2022-23 ನೇ ಸಾಲಿನಲ್ಲಿ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಬ್ಯಾಂಕ್ ನ 2022-23 ನೇ ಸಾಲಿನ ಬ್ಯಾಂಕ್ ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಯವರನ್ನ ಗೌರವಿಸಲಾಯಿತು.
ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಏನ್. ರಾಜೇಂದ್ರಕುಮಾರ್ ಹಾಗೂ ನಿರ್ದೇಶಕರಾದ ಟಿ. ರಾಜರಾಮ್ ಭಟ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.